Wednesday, May 15, 2024
Homeತಾಜಾ ಸುದ್ದಿಭೀಕರ ರಸ್ತೆ ಅಪಘಾತ: ಲಾರಿ-ಬಸ್ ಡಿಕ್ಕಿಯಾಗಿ 14 ಮಂದಿ ಸಾವು

ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಡಿಕ್ಕಿಯಾಗಿ 14 ಮಂದಿ ಸಾವು

spot_img
- Advertisement -
- Advertisement -

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.

ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಈ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!