Wednesday, October 7, 2026
Homeತಾಜಾ ಸುದ್ದಿಬೆಳ್ತಂಗಡಿ, ಬಂಟ್ವಾಳ ಮತ್ತು ಉಳ್ಳಾಲ ಬರಪೀಡಿತ ತಾಲೂಕುಗಳ ಮಟ್ಟಿಗೆ ಸೇರ್ಪಡೆ

ಬೆಳ್ತಂಗಡಿ, ಬಂಟ್ವಾಳ ಮತ್ತು ಉಳ್ಳಾಲ ಬರಪೀಡಿತ ತಾಲೂಕುಗಳ ಮಟ್ಟಿಗೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ರಾಜ್ಯದ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರ ಪೀಡಿತ ತಾಲೂಕುಗಳಾಗಿ ಘೋಷಣೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಈ ಮೊದಲು 177 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿತ್ತು. ಆ ಬಳಿಕ 40 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ನಡೆಸಲಾಗಿತ್ತು.

ಸದ್ಯ ಗ್ರೌಂಡ್ ಟ್ರೂಥಿಂಗ್ ಮುಕ್ತಾಯಗೊಂಡಿದ್ದು, ಇಂದು ಅಂತಿಮ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಬರ ಪೀಡಿತ ತಾಲೂಕುಗಳ ಸಂಖ್ಯೆ 217 ಕ್ಕೆ ಏರಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳು, ಉಡುಪಿ ಜಿಲ್ಲೆಯ ಉಡುಪಿ ಮತ್ತು ಬೈಂದೂರು ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!