Thursday, June 4, 2026
Homeಅಪರಾಧಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಗೆ ವಂಚನೆ; ಯುವತಿಗೆ 2ಕೋಟಿ ರೂ ಪಂಗನಾಮ ಹಾಕಿದ ಪ್ರೇಮಿ

ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಗೆ ವಂಚನೆ; ಯುವತಿಗೆ 2ಕೋಟಿ ರೂ ಪಂಗನಾಮ ಹಾಕಿದ ಪ್ರೇಮಿ

- Advertisement -
- Advertisement -

ಚಿತ್ರದುರ್ಗ: ಯುವತಿಯೋರ್ವಳಿಂದ ಕೋಟಿಗಟ್ಟಲೆ ಹಣವನ್ನು ಪಡೆದು, ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ಪ್ರೀತಿಸುವ ಮೂಲಕ ನಂಬಿಸಿ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಉದ್ಯೋಗದ ಆಸೆಗೆ ಯುವಕನಿಂದ ಕೋಟಿಗಟ್ಟಲೆ ಹಣದ ವಂಚನೆಗೆ ಒಳಗಾಗಿರುವ ಚಿತ್ರದುರ್ಗದ ಯುವತಿ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು. ವಿದೇಶದ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ಯುವತಿಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ಸೌರಬ್, ಫೇಕ್ ಆಫರ್ ಲೆಟರ್ ಕೊಟ್ಟು, ಈಕೆಯಿಂದ ಉದ್ಯೋಗದ ನೆಪದಲ್ಲಿ ಕೋಟಿಗಟ್ಟಲೆ ವಂಚಿಸಿದ್ದಾನೆ. ಅಷ್ಟೇಅಲ್ಲದೆ ಈ ಅಸಾಮಿ ಪ್ರತಿದಿನ ಯುವತಿಯೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಸಾಕಷ್ಟು ಬಾರಿ ಆಕೆಯನ್ನು ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗು ಎಂದು ಹೇಳಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಈಗಾಗಲೇ ಯುವತಿ ಆತನನ್ನು ಮದುವೆಯಾಗು ಎಂದು ಹೇಳಿಕೊಂಡಿದ್ದು, ಇದಕ್ಕೂ ಆತ ಸೊಪ್ಪು ಹಾಕಲಿಲ್ಲ. ಯುವತಿ ಹಾಗೂ ಆಕೆಯ ಕುಟುಂಬ ನಮ್ಮಿಂದ ಪಡೆದ ಎರಡೂವರೆ ಕೋಟಿ ರೂ. ಹಣವಾದರೂ ವಾಪಸ್ ಕೊಟ್ಟುಬಿಡು ಎಂದು ಅಂಗಲಾಚಿದರೂ ಸಹ ಕಿಂಚಿತ್ ಅನುಕಂಪವಿಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.

ಪ್ರಕರಣದ ಕುರಿತು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಸಂತ್ರಸ್ತ ಯುವತಿಯ ತಂದೆ 2 ತಿಂಗಳ ಹಿಂದೆ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್‌ ಕುಮಾರ್, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕವಾದ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!