- Advertisement -
- Advertisement -
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಮತ್ತು ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಘೋಷಣೆಯಾಗಿದೆ.ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆ ಸರ್ಕಾರ ತೀರ್ಮಾನಿಸಿದೆ.
ಎಲ್‌ಕೆಜಿಯಿಂದ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಯಾಣ ಮಾಡಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟ್ವಿಟರ್ ಮೂಲಕ ಪ್ರಕಟಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿನ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಕೊರತೆ ಕೂಗಿನ ಮಧ್ಯೆ ಈಗ ರಾಜ್ಯ ಸರ್ಕಾರ ಉಚಿತ ಬಸ್ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳನ್ನು ಸೆಳೆಯಲು ಮುಂದಾಗಿದೆ.
- Advertisement -