Thursday, June 4, 2026
Homeತಾಜಾ ಸುದ್ದಿಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ

ಎಸ್ಸೆಸ್ಸೆಲ್ಸಿ-ಪಿಯುಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ

- Advertisement -
- Advertisement -

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಜೂನ್‌ 25ರಿಂದ ಜುಲೈ 4ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ನಿಗದಿತ ಅವಧಿಯಲ್ಲಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಅಲ್ಲದೆ, ಜೂನ್‌ 18ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಪರೀಕ್ಷೆ ಇದ್ದು, ಅಂದು ಕೂಡ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ನಿಗಮ ಎಲ್ಲಾ ಚಾಲಕ-ನಿರ್ವಾಹಕರಿಗೆ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಅಲ್ಲದೆ ಬಸ್ ತೆರಳುವ ಮಾರ್ಗದಲ್ಲಿ ಪರೀಕ್ಷೆ ಕೇಂದ್ರಗಳು ಇದ್ದಲ್ಲಿ ವಿದ್ಯಾರ್ಥಿಗಳು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆಗೂ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

- Advertisement -

Latest News

error: Content is protected !!