Sunday, May 19, 2024
Homeತಾಜಾ ಸುದ್ದಿSSLC ಮತ್ತು PUC ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು KSRTC ಬಸ್ ನಿಂದ 'ಉಚಿತ ಪ್ರಯಾಣ'ಕ್ಕೆ ಅವಕಾಶ

SSLC ಮತ್ತು PUC ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು KSRTC ಬಸ್ ನಿಂದ 'ಉಚಿತ ಪ್ರಯಾಣ'ಕ್ಕೆ ಅವಕಾಶ

spot_img
- Advertisement -
- Advertisement -

ರಾಜ್ಯದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಉಳಿದಿದ್ದಂತ ಇಂಗ್ಲಿಷ್ ವಿಷಯದ ಪರೀಕ್ಷೆ ಇದೇ ಜೂನ್ 18ರಂದು ರಾಜ್ಯಾಧ್ಯಂತ ನಡೆಯಲಿದೆ. ಇಂತಹ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.

ಇದೇ ತಿಂಗಳ 6 ರಂದು ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಹಾಗೂ ಇದೇ ತಿಂಗಳ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೂ, ಪರೀಕ್ಷಾ ಕೇಂದ್ರದಿಂದ ತಮ್ಮ ಮನೆಯವರಿಗೂ ಬಿಎಂಟಿಸಿ ಬಸ್​​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಕೇಂದ್ರ ಕಚೇರಿ ಸುತ್ತೋಲೆ ಮೂಲಕ ಸೂಚಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ಅಥವಾ ಪ್ರಸ್ತುತ ಸಾಲಿನ ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ತೋರಿಸಿ ಬಸ್​ಗಳಲ್ಲಿ ಪ್ರಯಾಣ ಮಾಡಬೇಕು. ಈ ಉಚಿತ ಪ್ರಯಾಣ ಸಾಮಾನ್ಯ ಸೇವೆ ಸಾರಿಗೆ ಬಸ್​ಗಳಲ್ಲಿ ಮಾತ್ರ ಇರಲಿದೆ

- Advertisement -
spot_img

Latest News

error: Content is protected !!