Wednesday, May 1, 2024
Homeತಾಜಾ ಸುದ್ದಿ"ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ"

“ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ”

spot_img
- Advertisement -
- Advertisement -

ಬೆಂಗಳೂರು: ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು.

ಕೊರೋನ ಚಿಕಿತ್ಸೆಯಲ್ಲಿ ಎರಡು ವಿಧಗಳಿವೆ. ಕೋವಿಡ್‌ ದೃಢವಾದ ಕೂಡಲೇ ಬಿಬಿಎಂಪಿ ಅಥವಾ ಸ್ಥಳೀಯ ಆಡಳಿತದ ಮೂಲಕ ನೋಂದಣಿ ಮಾಡಿಕೊಂಡು ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಸರಕಾರದಲ್ಲಿ ನೋಂದಣಿ ಮಾಡಿಕೊಳ್ಳದೇ, ನೇರವಾಗಿ ಅವರೇ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅಂತಹವರು ಚಿಕಿತ್ಸಾ ವೆಚ್ಚವನ್ನು ಅವರೇ ಭರಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಶುಲ್ಕ ವಿಧಿಸುತ್ತಿರುವುದು ಗಮನಕ್ಕೆ ಬಂದ ಕೂಡಲೇ, ಖಾಸಗಿಯವರಿಗೂ ಕೊರೋನಾ ಚಿಕಿತ್ಸಾ ವೆಚ್ಚವನ್ನು ನಿಗದಿ ಮಾಡಿದ್ದೇವೆ ಎಂದರು.

- Advertisement -
spot_img

Latest News

error: Content is protected !!