- Advertisement -
- Advertisement -
ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:30.08.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಮಿಫ್ರಾ, ದಂತವೈದ್ಯರು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 130ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ. ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಸ್ವೀಕೃತ., ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
- Advertisement -


