Thursday, May 16, 2024
HomeUncategorizedಉಕ್ರೇನ್ ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಶಿಕ್ಷಣ

ಉಕ್ರೇನ್ ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಶಿಕ್ಷಣ

spot_img
- Advertisement -
- Advertisement -

ತುಮಕೂರು: ಉಕ್ರೇ​ನ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ತುಮಕೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯವು ಅವಕಾಶ ಕಲ್ಪಿಸಿದೆ.

ಒಟ್ಟು 27 ವಿದ್ಯಾರ್ಥಿಗಳು ರಷ್ಯಾ ಉಕ್ರೇನ್ ಯುದ್ಧದ ವೇಳೆ ಭಾರತಕ್ಕೆ ಮರಳಿದ್ದರು. ಈ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೆರವಿಗೆ ಧಾವಿಸಿದ್ದಾರೆ. ಮಠದ ಕಾಲೇಜಿನಲ್ಲಿ 16 ವಿದ್ಯಾಥಿರ್ಗಳಿಗೆ ಪ್ರಾಯೋಗಿಕ ತರಗತಿ, ಗ್ರಂಥಾಲಯ ಸೇರಿದಂತೆ ಅಗತ್ಯ ನೆರವು ನೀಡಿ ಕ್ಲಿನಿಕಲ್​ ಸಪೋರ್ಟ್​ ಸಿಗುವಂತೆ ಮಾಡಲಾಗಿದೆ. ಸದ್ಯ ವೈದ್ಯಕೀಯ ಕೋರ್ಸ್​ಗೆ ಪೂರಕ ಹಾಗೂ ಬೆಂಬಲವಾಗಿ ಕಾಲೇಜು ಸಿಬ್ಬಂದಿ ನಿಂತಿದ್ದಾರೆ. ಈ ಮಕ್ಕಳ ಮುಂದಿನ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ಸರ್ಕಾರವೇ ನಿರ್ಧರಿಸಲಿದೆ.

ನಮ್ಮ ಜಿಲ್ಲೆಯಿಂದ ಒಟ್ಟು 27 ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ ನಮ್ಮಲ್ಲಿಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಸದ್ಯ ಪ್ರಾಯೋಗಿಕ ತರಗತಿ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ವೆಚ್ಚ ಪಡೆಯದೆ ಉಚಿತ ಶಿಕ್ಷಣ ನೀಡುತ್ತಿದ್ದೇವೆ. ಉಕ್ರೇನ್​ನಿಂದ ಆನ್​ಲೈನ್​ ತರಗತಿಗಳ ಮೂಲಕ ಬೋಧನೆ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಪ್ರಾಕ್ಟಿಕಲ್​ ತರಬೇತಿ ಪಡೆಯುತ್ತಿದ್ದಾರೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಎಸ್​.ಪರಮೇಶ್​ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!