Wednesday, June 3, 2026
Homeತಾಜಾ ಸುದ್ದಿಕೆ ಎಸ್ ಆರ್ ಟಿ ಸಿಬಸ್ ನಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಉಚಿತ...

ಕೆ ಎಸ್ ಆರ್ ಟಿ ಸಿಬಸ್ ನಲ್ಲಿ ಎಸ್ಸೆಸೆಲ್ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

- Advertisement -
- Advertisement -

ಬೆಂಗಳೂರು: ಮಾರ್ಚ್ 31ರಿಂದ  ಎಸ್ ಎಸ್ ಎಲ್ ಸಿ  ಪರೀಕ್ಷೆ ಆರಂಭವಾಗುತ್ತಿದ್ದು ಕೆಎಸ್ ಆರ್ ಟಿಸಿ ಬಸ್ ನಲ್ಲಿ  ಪರೀಕ್ಷೆ ಬರೆಯಲು ತೆರಳುವ  ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಎಸ್ ಎಸ್ ಎಲ್ ಸಿ ಪರೀಕ್ಷಾ  ಪ್ರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್ಸು ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ಸೂಚಿಸಿದೆ.

- Advertisement -

Latest News

error: Content is protected !!