Friday, April 26, 2024
Homeತಾಜಾ ಸುದ್ದಿಗುಡ್ ನ್ಯೂಸ್: 3 ತಿಂಗಳು ಸಿಲಿಂಡರ್ ಉಚಿತವಾಗಿ ವಿತರಣೆಗೆ ರಾಜ್ಯ ಸರ್ಕಾರ ನಿರ್ಧಾರ

ಗುಡ್ ನ್ಯೂಸ್: 3 ತಿಂಗಳು ಸಿಲಿಂಡರ್ ಉಚಿತವಾಗಿ ವಿತರಣೆಗೆ ರಾಜ್ಯ ಸರ್ಕಾರ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಜಾರಿಯಾಗಿರುವುದರಿಂದ ಕೇಂದ್ರ ಸರ್ಕಾರ ಉಜ್ವಲ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳು ಉಚಿತವಾಗಿ ಸಿಲಿಂಡರ್ ವಿತರಿಸಲು ಮುಂದಾಗಿದೆ.

ಅದೇ ರೀತಿ ರಾಜ್ಯದಲ್ಲಿಯೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಂದಿನ ಮೂರು ತಿಂಗಳು ಉಚಿತವಾಗಿ ಸಿಲಿಂಡರ್ ವಿತರಿಸಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ತಿಂಗಳಿಗೆ ಒಂದರಂತೆ 3 ತಿಂಗಳು ರೀಫಿಲ್ಲಿಂಗ್ ಸಿಲಿಂಡರ್ ಅನ್ನು ಉಚಿತವಾಗಿ ನೀಡಲಾಗುವುದು. 1 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ರಾಜ್ಯ ಸರ್ಕಾರಕ್ಕೆ ಸುಮಾರು 25 ಕೋಟಿ ರೂಪಾಯಿ ಹೊರೆಯಾಗಲಿದ್ದು, ಆಹಾರ ಇಲಾಖೆ ಉಸ್ತುವಾರಿ ವಹಿಸಿಕೊಳ್ಳಲಿದೆ. ಇದೇ ರೀತಿ ಅರಣ್ಯ ಇಲಾಖೆಯ ಎಸ್.ಸಿ.ಪಿ./ ಟಿ.ಎಸ್.ಪಿ. ಅಡಿ ಉಚಿತವಾಗಿ ಸಿಲಿಂಡರ್ ಸಿಲಿಂಡರ್ ಗಳನ್ನು ವಿತರಿಸಲಾಗುವುದು.

- Advertisement -
spot_img

Latest News

error: Content is protected !!