Thursday, June 4, 2026
Homeಕರಾವಳಿಗುರಿಪಳ್ಳದ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ

ಗುರಿಪಳ್ಳದ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ

- Advertisement -
- Advertisement -

ಬೆಳ್ತಂಗಡಿ: ಜಯನಗರ-ಗುರಿಪಳ್ಳದ ಸುವರ್ಣ ಮಹೋತ್ಸವ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.‌

ಈ ಶಿಬಿರವು ದಿನಾಂಕ 17-05-2026 ಭಾನುವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಜಯನಗರ, ಗುರಿಪಳ್ಳ, ಬೆಳ್ತಂಗಡಿ ತಾಲೂಕು, ದ.ಕ. ಜಿಲ್ಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಜನರಲ್ ತಪಾಸಣೆ, ಸ್ತ್ರೀರೋಗ, ಮಕ್ಕಳ ಆರೋಗ್ಯ, ಕಿವಿ-ಮೂಗು-ಗಂಟಲು, ಎಲುಬು ಮತ್ತು ಕೀಲು ಸಂಬಂಧಿತ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಲಭ್ಯವಿರಲಿವೆ. ಜೊತೆಗೆ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ವಿವಿಧ ತಜ್ಞ ವೈದ್ಯರು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ರಕ್ತದಾನದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ರಕ್ತದಾನ ಶಿಬಿರವೂ ನಡೆಯಲಿದ್ದು, ಯುವಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಕೋರಲಾಗಿದೆ.

- Advertisement -

Latest News

error: Content is protected !!