Monday, July 1, 2024
Homeಕರಾವಳಿಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ

spot_img
- Advertisement -
- Advertisement -

ಶಿರ್ವ: ಲಯನ್ಸ್ ಕ್ಲಬ್ ಶಿರ್ವ, ಸಂತ ಮೇರಿ ಮಹಾವಿದ್ಯಾಲಯ ಶಿರ್ವ,ಸಂತ ಮೇರಿ ಪಿಯು ಕಾಲೇಜು ಹಳೆವಿದ್ಯಾರ್ಥಿ ಸಂಘ,ಸ್ತೃೀ ಸಂಘಟನೆ ಶಿರ್ವ,ಕಸ್ತೂರಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ಮಣಿಪಾಲ್ ಇವರ ಸಂಯುಕ್ತಾಶ್ರಯದಲ್ಲಿ ಹೃದಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಧರ್ಮ ಗುರುಗಳು ಅಲೆಕ್ಸಾಂಡರ್ ಡೆನಿಸ್ ಡೇಸಾರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಈ ಸಮಯದಲ್ಲಿ ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದು ನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತದೆ ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಹೇಳಿದರು.

ಕೆ ಎಂಸಿ ಮಣಿಪಾಲ ಇಲ್ಲಿಯ ವೈದ್ಯರಾದ ಶ್ರೀ ಗೋಸಾವಿ ಸಿದ್ಧಾರ್ಥ್ ಹೃದಯ ತಪಾಸಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಮೆಲ್ವಿನ್ ನೊರೊನ್ನ,ಪಿಯು ಸಂತಮೇರಿ ಕಾಲೇಜು ಹಳೆವಿದ್ಯಾಥಿ೯ ಸಂಘ ಅಧ್ಯಕ್ಷ ರು,ಲ। ಜಾಜ್೯ ಅನಿಲ್ ಡಿ’ಸೋಜ ಅಧ್ಯಕ್ಷ ರು ಲಯನ್ಸ್ ಕ್ಲಬ್ ಶಿವ೯,ಶ್ರೀಮತಿ ಜ್ಯೋತಿ ಡಿ’ಸೋಜ ,ಅಧ್ಯಕ್ಷರು ಸ್ತ್ರಿಸಂಘಟನೆ ಶಿವ೯, ಮಥಾಯಸ್ ಲೋಬೊ ಕಾಯ೯ದಶಿ೯ ಪಿಯು ಕಾಲೇಜು ಹಳೆವಿದ್ಯಾಥಿ೯ ಸಂಘ,ಶಿವ೯ ಕಾಲೇಜಿನ ಕ್ಷೇಮಪಾಲನಾ ಅಧಿಕಾರಿ ಯಶೋಧ ,ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್, ಎನ್ಎಸ್ಎಸ್ ಅಧಿಕಾರಿಗಳಾದ ಪ್ರೇಮನಾಥ್ ಕೋಟ್ಯಾನ್,ರಕ್ಷಾ , ರೋವರ್ಸ್ ರೇಂಜರ್ಸ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ಶ್ರೀ ವಿಠ್ಠಲ್ ನಾಯಕ್ ಉಪಸ್ಥಿತರಿದ್ದರು.

ಬೆಳಿಗ್ಗೆ 9:00 ರಿಂದ ಮಧ್ಯಾಹ್ನ ಒಂದರ ತನಕ ಸುಮಾರು 80 ಜನರು ಶಿಬಿರದ ಪ್ರಯೋಜವನ್ನು ತಮ್ಮ ಆರೋಗ್ಯತಪಾಸಣೆ ಮಾಡುವ ಮೂಲಕ ಪ್ರಯೋಜನ ಪಡೆದುಕೊಂಡರು.
ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತ , ಕಂಪನಿ ಸಾರ್ಜೆಂಟ್ ಕ್ವಾಟರ್ಮಸ್ಟರ್ ಮೋಹಿತ್ ಎನ್ ಸಾಲಿಯಾನ್, ಕಾರ್ಪೊರಲ್ ಧೀರಜ್ ಆಚಾರ್ಯ, ಎನ್‌ಎಸ್‌ಎಸ್ ಸ್ವಯಂಸೇವಕರು- ವೈಷ್ಣವಿ, ಮಿನಾಜ್, ಸಿಂಚನಾ, ಶ್ರೇಯಸ್, ಮೊಹಮ್ಮದ್ ಅಫ್ನಾನ್, ರೋವರ್ ಸ್ವಯಂಸೇವಕ – ಡಾರಿಲ್ ಮತ್ತು ಕಾಲೇಜಿನ ಆಡಳಿತ ಸಿಬ್ಬಂದಿ ವರ್ಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಂಪೂರ್ಣ ಸಹಕಾರವನ್ನು ನೀಡಿದರು.

ಸಂತಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಐವನ್ ಮೊನಿಸ್ ರವರು ಎಲ್ಲರನ್ನೂ ಸ್ವಾಗತಿಸಿ, ಶ್ರೀಚಾರ್ಲ್ಸ್ ಮೋಹನ್ ನೊರೊನ್ಹ ಲಯನ್ಸ್ ಕ್ಲಬ್ ಶಿರ್ವ ವಂದಿಸಿ, ಶ್ರೀ ನೋರ್ಬರ್ಟ್ ಮಚಾದೊ ಮಾಜಿ ಅಧ್ಯಕ್ಷರು ಲಯನ್ಸ್ ಕ್ಲಬ್ ಶಿರ್ವ ಕಾರ್ಯಕ್ರಮ ನಿರೂಪಿಸಿದರು.

- Advertisement -
spot_img

Latest News

error: Content is protected !!