Friday, June 26, 2026
Homeಕರಾವಳಿಬಡವರಿಗೆ ಮನೆ ನಿರ್ಮಾಣ ಮಾಡಿ ಸಮಾಜಕ್ಕೆ ಮಾದರಿಯಾದ ಕಶೆಕೋಡಿ ಸೂರ್ಯನಾರಾಯಣ ಭಟ್

ಬಡವರಿಗೆ ಮನೆ ನಿರ್ಮಾಣ ಮಾಡಿ ಸಮಾಜಕ್ಕೆ ಮಾದರಿಯಾದ ಕಶೆಕೋಡಿ ಸೂರ್ಯನಾರಾಯಣ ಭಟ್

- Advertisement -
- Advertisement -

ಬಂಟ್ವಾಳ: ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ, ವಿಶ್ವ ಹಿಂದು ಪರಿಷತ್ತಿನಲ್ಲಿ ಜಿಲ್ಲೆಯ ಸತ್ಸಂಗ ಪ್ರಮುಖ ಹಾಗೂ ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕರಾಗಿರುವ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಮೂವರು ಅರ್ಹರಿಗೆ ತನ್ನ ಸ್ವಂತ ಖರ್ಚಿನಲ್ಲಿ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ.

ಕಶೆಕೋಡಿಯಲ್ಲಿ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮ ಸರಳ ಸಮಾರಂಭದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಮನೆಗಳ ಕೀಲಿಕೈಯನ್ನು ಹಸ್ತಾಂತರಿಸುವ ಮೂಲಕ ಆಶೀರ್ವದಿಸಿದರು.
ಈ ಸಂದರ್ಭ ವಿಶ್ವ ಹಿಂದು ಪರಿಷತ್ ಪ್ರಮುಖರಾದ ಕ.ಕೃಷ್ಣಪ್ಪ ಸಹಿತ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!