Friday, May 17, 2024
Homeತಾಜಾ ಸುದ್ದಿವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ಫ್ರೀ ಇಂಟರ್‌ನೆಟ್‌..!

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ಫ್ರೀ ಇಂಟರ್‌ನೆಟ್‌..!

spot_img
- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸಲಾಗುವುದು ಮತ್ತು ಈ ಕುರಿತು ಈಗಾಗಲೇ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಲ್ಯಾಪ್ ‌ಟಾಪ್‌ ಕೊಟ್ಟ ನಂತರ ಅವುಗಳ ಸದುಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಇಂಟರ್‌ನೆಟ್‌ ಸೇವೆ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಕೋರಿವೆ. ಇದರ ನಡುವೆ ಆನ್‌ ಲೈನ್‌ ಕಂಟೆಂಟ್‌ ಕೂಡ ಒದಗಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ ಎಂದು ವಿವರಿಸಿದ್ದಾರೆ.

ಪ್ರಥಮ ವರ್ಷದ 1.10 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವರು ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡಲಿದ್ದಾರೆ. ಇವರಿಗೆ ಸಾಮಾನ್ಯ ತರಗತಿ ಜತೆಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡುವ, ತರಬೇತಿ ಒದಗಿಸುವ ಬಗ್ಗೆಯು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!