Thursday, March 28, 2024
Homeಉದ್ಯಮ`ಪಿಎಂ ಗರೀಬ್ ಕಲ್ಯಾಣ್ ಯೋಜನೆ' : ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್

`ಪಿಎಂ ಗರೀಬ್ ಕಲ್ಯಾಣ್ ಯೋಜನೆ’ : ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್

spot_img
- Advertisement -
- Advertisement -

ನವದೆಹಲಿ : ಕೊರೋನಾ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ವಿತರಣೆ ಮಾಡಲು ಕೇಂದ್ರ ಸರ್ಕಾರ ಆದೇಶ ನೀಡಿದೆ.


ಈ ಕುರಿತಂತೆ ಬುಧವಾರ ನಡೆದ ಕೇಂದ್ರ ಸಂಪುಟಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ವಿತರಿಸಲಾಗುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಲು ಸಂಪುಟ ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ಇನ್ನೂ 5 ತಿಂಗಳು ಹೆಚ್ಚುವರಿ ಅಂದರೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.


ಕೋವಿಡ್ ಎರಡನೇ ಅಲೆ( Covid 2nd Wave)ಯಲ್ಲಿ ಬಡ ಪಿಡಿಎಸ್ (ಸಾರ್ವಜನಿಕ ವಿತರಣಾ ವ್ಯವಸ್ಥೆ) ಫಲಾನುಭವಿಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಕಡಿಮೆ ಮಾಡುವ ಸಲುವಾಗಿ ಈ ವರ್ಷದ ಜೂನ್‌ವರೆಗೆ ಎರಡು ತಿಂಗಳ ಕಾಲ ಪಿಎಂಜಿಕೆ ಯೋಜನೆಯನ್ನು ಪುನಃ ಪರಿಚಯಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ಮತ್ತೆ 5 ತಿಂಗಳುಗಳಿಗೆ ವಿಸ್ತರಿಸಲಾಗಿದೆ.
ಈ ಹಿಂದೆ ಜೂನ್ 7ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ(Narendra Modi), ‘ಪ್ರತಿಯೊಬ್ಬ ಬಡ ನಾಗರಿಕರೊಂದಿಗೆ ಸರ್ಕಾರವೂ ಜೊತೆಗಿರುತ್ತದೆ. ನವೆಂಬರ್‌ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ. ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ ಎಂದು ಹೇಳಿದ್ದರು.

- Advertisement -
spot_img

Latest News

error: Content is protected !!