Saturday, May 4, 2024
Homeತಾಜಾ ಸುದ್ದಿಜುಲೈ 1 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಜುಲೈ 1 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು : ಕೊರೋನಾ ಸೋಂಕು ವಿದ್ಯಾರ್ಥಿಗಳಿಗೆ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ, ರಾಜ್ಯ ಸರ್ಕಾರ ಜುಲೈ.1ರಿಂದ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕೋವಿಡ್-19 ಲಸಿಕಾ ಅಭಿಯಾನವನ್ನು ಆಯೋಗಿಸಲಾಗುತ್ತಿದ್ದು, ಈ ಸಂಬಂಧ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್ ಮಾಡಿದೆ.

ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಸಾಂಕ್ರಾಮಿಕದ ವೈರಾಣು ಜನರ ಆರೋಗ್ಯ ಮತ್ತು ಜೀವಗಳಿಗೆ ಒಡ್ಡುತ್ತಿರುವ ಅಪಾಯವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರೋಗ ನಿರೋಧಕ ಶಕ್ತಿಯನ್ನು ವರ್ಧಿಸಲು ಮತ್ತು ರೋಗ ಹರಡುವಿಕೆಯನ್ನು ತಡೆಗಟ್ಟಲು ಲಸಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ ಕ್ರಮವಾಗಿರುತ್ತದೆ.

ರಾಜ್ಯದ ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಗಳು ಮತ್ತು ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸುರಕ್ಷತೆ ಮತ್ತು ಆರೋಗ್ಯದ ದೃಷ್ಠಿಯಿಂದ ಪ್ರತಿ ಕಾಲೇಜಿನಲ್ಲಿ ಲಸಿಕಾ ಅಭಿಯಾನವನ್ನು ಆಯೋಜಿಸುವುದು ಅತ್ಯಗತ್ಯವಾಗಿರುತ್ತದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನವು ಪತ್ರದಲ್ಲಿ ಎಲ್ಲ ಕಾಲೇಜುಗಳಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ನಡೆಸುವಂತೆ ತಿಳಿಸಿರುತ್ತದೆ. ಮುಂದಿನ ತಿಂಗಳಿನಿಂದ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ಕಾಲೇಜುಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವುದರಿಂದ, ಈ ಕೋವಿಡ್-19 ಲಸಿಕಾ ಅಭಿಯಾನ ಕಾರ್ಯಕ್ರಮ ಅತ್ಯಂತ ಮಹತ್ವಪೂರ್ಣದ್ದಾಗಿರುತ್ತದೆ.

ಈ ಹಿನ್ನಲೆಯಲ್ಲಿ, ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ತಮ್ಮ ತಮ್ಮ ಕಾಲೇಜುಗಳಲ್ಲಿ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲು ಈ ಮಾರ್ಗಸೂಚಿ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

- Advertisement -
spot_img

Latest News

error: Content is protected !!