Tuesday, May 7, 2024
Homeತಾಜಾ ಸುದ್ದಿರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ಪುನರಾರಂಭ-ಕೊರೋನಾ ಸಂಕಷ್ಟದ ನಡುವೆ ಮಹತ್ವದ ನಿರ್ಧಾರ!..

ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ಪುನರಾರಂಭ-ಕೊರೋನಾ ಸಂಕಷ್ಟದ ನಡುವೆ ಮಹತ್ವದ ನಿರ್ಧಾರ!..

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಗಳನ್ನು ಹೈಬ್ರಿಡ್ ಮಾದರಿಯಲ್ಲಿ ತೆರೆಯಲು ಒಪ್ಪಿಗೆ ಸೂಚಿಸಲಾಗಿದೆ.

ಈ ಕುರಿತಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದ್ದು, ರಾಜ್ಯಾಧ್ಯಂತ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಇಂದಿನ ಸಿಎಂ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ರಾಜ್ಯದಲ್ಲಿ ಡಿಗ್ರಿ ಕಾಲೇಜ್ ತೆರೆಯಲು ತೀರ್ಮಾನಿಸಲಾಗಿದೆ. ತರಗತಿಗೆ ಹಾಜರಾಗಿಯಾದರೂ ಕಲಿಯಬಹುದು. ಇಲ್ಲವೇ ಆನ್ ಲೈನ್ ತರಗತಿಯಲ್ಲಿ ಹಾಜರಾಗಿಯಾದರೂ ವಿದ್ಯಾರ್ಥಿಗಳು ಕಲಿಕೆ ಮುಂದುವರೆಸಬಹುದು ಎಂಬುದಾಗಿ ತಿಳಿಸಿದರು. ಹೀಗಾಗಿ ರಾಜ್ಯದಲ್ಲಿ ಎಲ್ ಎಂ ಎಸ್ ಆಧಾರಿತವಾಗಿ ನವೆಂಬರ್ 17ರಿಂದ ಪದವಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!