- Advertisement -
- Advertisement -
ಬೆಂಗಳೂರು: ರಾಜ್ಯಾದ್ಯಂತ ಮಾ. 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮಾ. 20ರ ವರೆಗೆ ಪರೀಕ್ಷೆಗಳು ನಡೆಯಲಿದೆ.
ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಗೊಂದಲವಾಗದಂತೆ, ಸುಸೂತ್ರವಾಗಿ ಪರೀಕ್ಷೆ ಬರೆಯುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸರ್ವ ರೀತಿಯ ಸಿದ್ಧತೆಗಳನ್ನು ಮಾಡಿದ್ದು, ಪರೀಕ್ಷಾ ಕೇಂದ್ರಗಳ ಸುರಕ್ಷೆಯ ದೃಷ್ಟಿಯಿಂದ ಪೊಲೀಸ್ ಸಿಬಂದಿ, ಆರೋಗ್ಯ ಸಿಬಂದಿಯನ್ನು ನಿಯೋಜಿಸಲಾಗಿದೆ.
ಮಾ. 21ರಿಂದ ಎಸೆಸೆಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ.
ಇನ್ನು ಮುಖ್ಯವಾಗಿ ಈ ಬಾರಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಲಾಗಿದೆ ಎಂಬುದನ್ನು ಗಮನಿಸಬೇಕಾಗಿದೆ.
ಈ ಹಿಂದೆ ಪ್ರತಿಯೊಂದು ವಿಷಯಕ್ಕೂ 3.15 ತಾಸುಗಳ ಅವಧಿ ಇರುತ್ತಿತ್ತು. ಆದರೆ ಈ ಬಾರಿ ಇದನ್ನು 3 ತಾಸುಗಳಿಗೆ ಇಳಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗಲಿದ್ದು, ಅಪರಾಹ್ನ 1ರ ವರೆಗೆ ನಡೆಯಲಿದೆ.
- Advertisement -