Thursday, June 4, 2026
Homeತಾಜಾ ಸುದ್ದಿನಾಳೆಯಿಂದ ಕೊರೊನಾ ವ್ಯಾಕ್ಸಿನ್ ಅಭಿಯಾನ: ರಾಜ್ಯದ ಐದು ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್

ನಾಳೆಯಿಂದ ಕೊರೊನಾ ವ್ಯಾಕ್ಸಿನ್ ಅಭಿಯಾನ: ರಾಜ್ಯದ ಐದು ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್

- Advertisement -
- Advertisement -

ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಅಭಿಯಾನದ ಡ್ರೈ ರನ್, ನಾಳೆಯಿಂದ ನಡೆಯಲಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಡ್ರೈ ರನ್​ಗೆ ಐದು ಜಿಲ್ಲೆ ಆಯ್ಕೆ ಮಾಡಲಾಗಿದೆ.  ಇದಕ್ಕೆ ರಾಜ್ಯದಲ್ಲಿ ಹೆಚ್ಚು ಸಿದ್ಧತೆಗಳು ನಡೆದಿವೆ. ಜಿಲ್ಲಾ ಕೇಂದ್ರ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ನಡೆಯಲಿದೆ ಎಂದರು.

ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈರನ್ ನಡೆಯಲಿದೆ. ಲಸಿಕೆ ಬಂದ ಕೂಡಲೇ ಜನರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!