- Advertisement -


- Advertisement -
ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರಾಗಿ (ಸ್ಪೀಕರ್) ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್. ಪಾಟೀಲ್) ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಅಧಿವೇಶನದ ಎರಡನೇ ದಿನವಾದ ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು.
- Advertisement -


