- Advertisement -


- Advertisement -
ಬೆಳ್ತಂಗಡಿ: ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಜುಲೈ 8 ರಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ
ಬೆಳ್ತಂಗಡಿಯ ಸುತ್ತಮುತ್ತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ನಡ ಗ್ರಾಮದ ಪ್ರಸಿದ್ಧ ಜಮಲಾಬಾದ್ ಗಡ (ಗಡಾಯಿಕಲ್ಲು) ಚಾರಣ ಮಾಡುವುದು ಸದ್ಯಕ್ಕೆ ಅಪಾಯಕಾರಿಯಾಗಿದೆ. ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಜುಲೈ 8 ರಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


