Saturday, June 6, 2026
Homeತಾಜಾ ಸುದ್ದಿತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

- Advertisement -
- Advertisement -

ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ಅವರು ತಮ್ಮ 89ನೇ ವರ್ಷ ವಯಸ್ಸಿನಲ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ ಗಡ್ಡಪ್ ಅವರು ಬಳಲುತ್ತಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಡ್ಡಪ್ಪ ಎಂದೇ ಖ್ಯಾತಿ ಪಡೆದಿದ್ದ ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು, ತಿಥಿ, ತರ್ಲೆ ವಿಲೇಜ್‌, ಜಾನಿ ಮೇರಾ ನಾಮ್‌, ಹಳ್ಳಿ ಪಂಚಾಯಿತಿ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

- Advertisement -

Latest News

error: Content is protected !!