Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದವರ ಬಂಧನ

ಬೆಳ್ತಂಗಡಿ; ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದವರ ಬಂಧನ

- Advertisement -
- Advertisement -

ಬೆಳ್ತಂಗಡಿ; ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಕಾಶಿಪಟ್ಣ  ಗ್ರಾಮದ ಹಳೆ ಅಂಗನವಾಡಿ ಕಟ್ಟಡದ ಬಳಿ ನಡೆದಿದೆ.

23.09.2023 ರಂದು ಸಂಜೆ ಸಾರ್ವಜನಿಕ  ಸ್ಥಳದಲ್ಲಿ ಆರೋಪಿಗಳಾದ ರವಿರಾಜ್  (65),ಜಯಾನಂದ (35), ರಜಾಕ್ (67), ಅಶೋಕ್ ಶೆಟ್ಟಿ (44), ತಾಜು ಶಿರ್ತಾಡಿ ಮತ್ತು ಶಬೀರ್  ವಾಲ್ಪಾಡಿ ಎಂಬವರು ಅಕ್ರಮವಾಗಿ ಇಸ್ಪೀಟ್ ಎಲೆಗಳಿಂದ ಹಣವನ್ನು ಪಣವಾಗಿಟ್ಟುಕೊಂಡು ಜುಗಾರಿ ಆಟ ಆಡುತ್ತಿದ್ದರು. ಈ ವೇಳೆ ಖಚಿತ ಮಾಹಿತ ಮೇರೆಗೆ ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 6 ಆರೋಪಿಗಳೊಂದಿಗೆ ಇಸ್ಪೀಟ್ ಎಲೆಗಳನ್ನು  ಹಾಗೂ ಆಟಕ್ಕೆ  ಬಳಸಿದ ನಗದು ಹಣ ಒಟ್ಟು 1960/- ರೂ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 60-2023 ಕಲಂ: 87  ಕೆ ಪಿ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!