Thursday, May 9, 2024
Homeತಾಜಾ ಸುದ್ದಿರಾಷ್ಟ್ರಪತಿ ಅಭ್ಯರ್ಥಿ ಆಗಲಾರೆ ಎಂದ ಮಹಾತ್ಮಗಾಂಧಿ ಮೊಮ್ಮಗ: ಹಾಗಾದ್ರೆ ವಿಪಕ್ಷಗಳ ಮುಂದಿನ ಆಯ್ಕೆ ಯಾರಿರಬಹುದು?

ರಾಷ್ಟ್ರಪತಿ ಅಭ್ಯರ್ಥಿ ಆಗಲಾರೆ ಎಂದ ಮಹಾತ್ಮಗಾಂಧಿ ಮೊಮ್ಮಗ: ಹಾಗಾದ್ರೆ ವಿಪಕ್ಷಗಳ ಮುಂದಿನ ಆಯ್ಕೆ ಯಾರಿರಬಹುದು?

spot_img
- Advertisement -
- Advertisement -

ಹೊಸದಿಲ್ಲಿ: ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿರೋಧ ಪಕ್ಷಗಳ ಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ತಾನು ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯುವುದಿಲ್ಲ ಎಂದು ರಾಷ್ಟ್ರಪತಿ ಮಹಾತ್ಮಾ ಗಾಂಧಿ ಅವರ ಮೊಮ್ಮಗ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ್‌ ಕೃಷ್ಣ ಗಾಂಧಿ ಹೇಳಿದ್ದಾರೆ. ಆ ಮೂಲಕ ವಿರೋಧ ಪಕ್ಷಗಳ ಮೂರನೇ ಅಭ್ಯರ್ಥಿ ಚುನಾವಣೆ ಸ್ಪರ್ಧೆಗೆ ಹಿಂದೇಟು ಹಾಕಿದಂತಾಗಿದೆ. ಈ ಹಿಂದೆ ರಾಷ್ಟ್ರೀಯವಾದಿ ಕಾಂಗ್ರೆಸ್ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದರು.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಗೋಪಾಲಕೃಷ್ಣ ಗಾಂಧಿ, ‘ವಿರೋಧ ಪಕ್ಷದ ಹಲವು ನಾಯಕರು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯನ್ನಾಗಿ ನನ್ನ ಹೆಸರು ಸೂಚಿಸಿ ಗೌರವ ಸಲ್ಲಿಸಿದ್ದಾರೆ. ದೇಶದ ವಿಪಕ್ಷಗಳ ಒಗ್ಗೂಡುವಿಕೆಗಿಂತ ಹೆಚ್ಚಾಗಿ, ರಾಷ್ಟ್ರೀಯ ಒಮ್ಮತ ಹಾಗೂ ರಾಷ್ಟ್ರದ ಸದ್ಯದ ವಾತಾವರಣವನ್ನು ಅರಿತಿರುವ ವ್ಯಕ್ತಿಯೊಬ್ಬರು ರಾಷ್ಟ್ರಪತಿ ಅಭ್ಯರ್ಥಿಯಾಗಬೇಕು ಎನ್ನುವುದು ನನ್ನ ಬಯಕೆ. ಹೀಗಾಗಿ ನನಗಿಂತ ಸಮರ್ಥ ಅಭ್ಯರ್ಥಿ ಬೇರೆಯವರು ಇದ್ದಾರೆ ಎನ್ನುವುದು ನನ್ನ ಅಭಿಮತ’ ಎಂದು ಅವರು ಹೇಳಿದ್ದಾರೆ.

ಇನ್ನು ಕೆಲವು ದಿನಗಳಲ್ಲಿ ರಾಷ್ಟ್ರಪತಿ ಚುನಾವಣೆ ಸಂಬಂಧ ಮುಂಬೈನಲ್ಲಿ ವಿರೋಧ ಪಕ್ಷಗಳ ಎರಡನೇ ಬೈಠಕ್‌ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿ ಅವರಿಂದ ಹೇಳಿಕೆ ಬಂದಿದೆ. ಹೀಗಾಗಿ ಅನಿವಾರ್ಯವಾಗಿ ವಿಪಕ್ಷಗಳಿಗೆ ಮತ್ತೊಬ್ಬ ಅಭ್ಯರ್ಥಿಯನ್ನು ಇಳಿಬೇಕಾಗಿ ಬಂದಿದೆ. ಶರದ್‌ ಪವಾರ್ ಹಾಗೂ ಫಾರೂಕ್‌ ಅಬ್ದುಲ್ಲಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧೆ ಮಾಡಲು ಹಿಂದೇಟು ಹಾಕಿದಾಗ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಸೂಚಿಸಿದ್ದರು. ಇದೀಗ ಗೋಪಾಲಕೃಷ್ಣ ಗಾಂಧಿ ಕೂಡ ಒಲ್ಲೆ ಎಂದು ಹೇಳಿದ್ದಾರೆ

- Advertisement -
spot_img

Latest News

error: Content is protected !!