Sunday, June 7, 2026
Homeತಾಜಾ ಸುದ್ದಿಬಂಟ್ವಾಳ: ಆ.31ರಿಂದ ಸೆ.4ರವರೆಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆ: ರಮಾನಾಥ್‌ ರೈ

ಬಂಟ್ವಾಳ: ಆ.31ರಿಂದ ಸೆ.4ರವರೆಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆ: ರಮಾನಾಥ್‌ ರೈ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಈ ಬಾರಿ ಆ.31ರಿಂದ ಸೆ.4ರ ವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಮಾಜಿ ಸಚಿವ, ಗಣೇಶೋತ್ಸವ ಆಚರಣಾ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಜಕ್ರಿಬೆಟ್ಟು ಶ್ರೀ ಗಣೇಶೋತ್ಸವವು ಸೌಹಾರ್ದತೆಯ ಸಮ್ಮೇಳನವಾಗಿ ರೂಪುಗೊಂಡು ಬಂಟ್ವಾಳದ ಹಬ್ಬವಾಗಿ ಆಚರಿಸಲ್ಪಡುತ್ತದೆ ಎಂದರು.

- Advertisement -

Latest News

error: Content is protected !!