Friday, June 5, 2026
Homeಕರಾವಳಿಬಂಟ್ವಾಳ: ಇಬ್ಬರು ಯುವಕರ ಮೇಲೆ ತಂಡವೊಂದು ದಾಳಿ ಮಾಡಿ ಹಲ್ಲೆ

ಬಂಟ್ವಾಳ: ಇಬ್ಬರು ಯುವಕರ ಮೇಲೆ ತಂಡವೊಂದು ದಾಳಿ ಮಾಡಿ ಹಲ್ಲೆ

- Advertisement -
- Advertisement -

ಬಂಟ್ವಾಳ: ಇಬ್ಬರು ಯುವಕರ ಮೇಲೆ ತಂಡವೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ತಸ್ಲೀಮ್ ಹಾಗೂ ಶಾಕಿರ್ ಗಾಯಗೊಂಡವರು. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್ ಯಾನೆ ಮಿಚ್ಚ, ಶರ್ಫುದ್ದೀನ್, ಅಶ್ರಫ್, ರಿಝ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸಿರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಹಲ್ಲೆ ನಡೆಸಿದ ಆರೋಪಗಳು.

ಆರೋಪಿಗಳು ತಸ್ಲೀಮ್ ಗೆ ಫೋನ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಹೇಳಿದ್ದಾರೆ. ಅದರಂತೆ ತಸ್ಲೀಮ್ ಅಲ್ಲಿಗೆ ಶಾಕಿರ್ ಜೊತೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!