Monday, June 8, 2026
Homeಕರಾವಳಿಮಂಗಳೂರುಮಂಗಳೂರಿನ ಹೊರವಲಯದಲ್ಲಿ ಯುವತಿ ಮೇಲೆ ಗ್ಯಾಂಗ್ ಆರೋಪ; ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ

ಮಂಗಳೂರಿನ ಹೊರವಲಯದಲ್ಲಿ ಯುವತಿ ಮೇಲೆ ಗ್ಯಾಂಗ್ ಆರೋಪ; ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರಿನ ಹೊರವಲಯದಲ್ಲಿ ಯುವತಿ ಮೇಲೆ ಗ್ಯಾಂಗ್ ಆರೋಪ ಕೇಳಿ ಬಂದಿದ್ದು ಕಲ್ಲಾಪು ಬಳಿ ನಿರ್ಜನ ಪ್ರದೇಶದಲ್ಲಿ ಹೊರರಾಜ್ಯದ ಯುವತಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾಳೆ.

ತಡರಾತ್ರಿ ನಶೆಯಲ್ಲಿದ್ದ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಬಳಿಕ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ವೇಳೆ ಯುವತಿಯ ಮೈಮೇಲೆ ಗಾಯಗಳಾಗಿದ್ದವು ಎನ್ನಲಾಗಿದೆ.ಇನ್ನು ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣೆ ಪೊಲೀಸರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿನ್ನೆ ತಡ ರಾತ್ರಿ ನಾಲ್ವರ ತಂಡ ಕಲ್ಲಾಪು ಬಳಿ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಯುವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನಷ್ಟೇ ಘಟನೆ ಬಗ್ಗೆ ನಿಖರ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!