Thursday, May 2, 2024
Homeಕರಾವಳಿಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣ...! 20 ಮಂದಿ ಪೊಲೀಸರ ವಶಕ್ಕೆ ...!

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣ…! 20 ಮಂದಿ ಪೊಲೀಸರ ವಶಕ್ಕೆ …!

spot_img
- Advertisement -
- Advertisement -

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಹತ್ತಿರದ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ, ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಉತ್ತರ ಭಾರತದ 20 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದರು. ಆ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾರ್ಖಾನೆಯನ್ನು ಕೇರಳ ಮೂಲದ ವ್ಯಕ್ತಿಗಳು ನಡೆಸುತ್ತಿದ್ದು ಇಲ್ಲಿ ಸುಮಾರು 25 ಮಂದಿ ದುಡಿಯುತ್ತಿದ್ದಾರೆ. ಬಾಲಕಿ ನಾಪತ್ತೆಯಾಗಿರುವುದು ಸಂಜೆ 4 ಗಂಟೆ ವೇಳೆಗೆ ಮನೆಮಂದಿಗೆ ತಿಳಿದುಬಂದಿತ್ತು. 6 ಗಂಟೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳೀಯವಾಗಿ ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ಮರಣೋತ್ತರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

- Advertisement -
spot_img

Latest News

error: Content is protected !!