- Advertisement -
![]()
- Advertisement -
ಕಾರ್ಕಳ; ನಿನ್ನೆ ಕಾರ್ಕಳದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಯುವತಿಗೆ ಅಮಲು ಪದಾರ್ಥ ನೀಡಿ ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕುಕ್ಕುಂದೂರು ಗ್ರಾಮದ 21 ವರ್ಷದ ಯುವತಿಗೆ ಅಮಲು ಪದಾರ್ಥ ನೀಡಿ ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಘಟನೆ ನಡೆದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Advertisement -


