Saturday, June 6, 2026
Homeಅಪರಾಧಕಾಲೇಜು ವಿದ್ಯಾರ್ಥಿನಿ ಮೇಲೆ ಐವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್...!

ಕಾಲೇಜು ವಿದ್ಯಾರ್ಥಿನಿ ಮೇಲೆ ಐವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್…!

- Advertisement -
- Advertisement -

ಮೈಸೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ ಗುಡ್ಡದ ಬಳಿ ಗ್ಯಾಂಗ್ ರೇಪ್ ನಡೆದಿರುವುದು ತಿಳಿದು ಬಂದಿದೆ.

ವಿದ್ಯಾರ್ಥಿನಿಯು ಸ್ನೇಹಿತನ ಜೊತೆ ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದೆ. ಸದ್ಯ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

- Advertisement -

Latest News

error: Content is protected !!