Monday, June 8, 2026
Homeಕರಾವಳಿಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ!

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ!

- Advertisement -
- Advertisement -

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ದಕ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಖಚಿತಪಡಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮಾಡಿ ಎಂಬಲ್ಲಿ ಈ ಪ್ರಕರಣ ನಡೆದಿದ್ದು, ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆಂದು ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಶಾಲೆಗೆಂದು ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಂದ ಪರಿಚಿತನೋರ್ವ ಸೇರಿದಂತೆ ಆರೋಪಿಗಳು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ಬಳಿ ಬಾಲಕಿಗೆ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಲಾಗಿದೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಮಾಡಿಯ ರೂಂ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಆಕೆಯನ್ನು ಬ್ರಹ್ಮರಕೂಟು ಬಳಿ ಬಿಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ಮಾಹಿತಿ ಸಿಕ್ಕಿತ್ತು.

- Advertisement -

Latest News

error: Content is protected !!