Sunday, June 28, 2026
Homeಕರಾವಳಿಕಾಸರಗೋಡುಕೇರಳದ ಕೊಚ್ಚಿಯಲ್ಲಿ‌ ಚಲಿಸುತ್ತಿದ್ದ ಕಾರಿನಲ್ಲೇ ಕಾಸರಗೋಡು ಮೂಲದ ಮಾಡೆಲ್ ಮೇಲೆ ಗ್ಯಾಂಗ್ ರೇಪ್

ಕೇರಳದ ಕೊಚ್ಚಿಯಲ್ಲಿ‌ ಚಲಿಸುತ್ತಿದ್ದ ಕಾರಿನಲ್ಲೇ ಕಾಸರಗೋಡು ಮೂಲದ ಮಾಡೆಲ್ ಮೇಲೆ ಗ್ಯಾಂಗ್ ರೇಪ್

- Advertisement -
- Advertisement -

ಕೇರಳ;  ಚಲಿಸುತ್ತಿದ್ದ ಕಾರಿನಲ್ಲೇ ಕಾಸರಗೋಡು ಮೂಲದ 19 ವರ್ಷದ ಮಾಡೆಲ್ ಮೇಲೆ ಕಾರಿನಲ್ಲೇ  ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ‌.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಎರ್ನಾಕುಲಂ ದಕ್ಷಿಣ ಪೊಲೀಸರು ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಕೊಚ್ಚಿಯ ರವಿಪುರಂ ಪ್ರದೇಶದ ಬಾರ್‌ನಲ್ಲಿ ಮಾಡೆಲ್‌ ಕುಡಿದು ನಂತರ ಅಲ್ಲೇ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಳು.ಬಳಿಕ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಆಕೆಯ ನಿವಾಸಕ್ಕೆ ಬಿಟ್ಟಿದ್ದಾರೆ.

ಈ ವೇಳೆ ದಾರಿಯಲ್ಲಿ ಚಲಿಸುವ ಕಾರಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಇದೀಗ ಸಂತ್ರಸ್ಥೆಯನ್ನು ಕಾಲಮಸ್ಸೇರಿ ಮೆಡಿಕಲ್‌ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಬಗ್ಗೆ ಕೇಸ್ ದಾಖಲಾಗಿದ್ದು, ನಂತರ ಪೊಲೀಸರು ಓರ್ವ ಮಹಿಳೆ ಸೇರಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ . ಆರೋಪಿಗಳು ಕೊಡುಂಗಲ್ಲೂರು ಮೂಲದವರು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!