Sunday, June 7, 2026
Homeತಾಜಾ ಸುದ್ದಿಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ನಿಧನ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ನಿಧನ

- Advertisement -
- Advertisement -

ಲಖ್ನೋ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಇಂದು ಸಾವನ್ನಪ್ಪಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆಗೆ ಪಾಶ್ರ್ವವಾಯು ಬಡಿದಿತ್ತು.

ಸೆಪ್ಟೆಂಬರ್ 14ರಂದು ತಮ್ಮ ದನಗಳಿಗೆ ಮೇವು ತರಲು ಹೋಗಿದ್ದಾಗ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದೊಯ್ದು ಕಾಮುಕರು ಅತ್ಯಾಚಾರವೆಸಗಿದ್ದರು. ಅತ್ಯಾಚಾರಕ್ಕೊಳಗಾಗಿ ಕಳೆದ 15 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!