Thursday, June 4, 2026
Homeಕರಾವಳಿಬೆಳ್ತಂಗಡಿ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ. ಹುಣ್ಸೆಕಟ್ಟೆಯ ನಿವಾಸಿಯಾಗಿರುವ ಮಂಜುನಾಥ ಗೌಡ(55) ಎಂಬವರು ಇಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್ ಗೌಡರವರು ಮಾಜಿ ಶಾಸಕರಾಗಿದ್ದ ಗಂಗಾಧರ್ ಗೌಡ ಅವರ ವಾಹನ ಚಾಲಕರಾಗಿದ್ದು , ಇತರ ವಾಹನಗಳಿಗೆ ಚಾಲಕರಾಗಿ ಹೋಗುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!