Friday, May 17, 2024
Homeಕರಾವಳಿಉಡುಪಿಉಡುಪಿ; ಬಣ್ಣ ತೆಗೆಯುವಾಗಲೇ ಹೃದಯಾಘಾತವಾಗಿ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಉಡುಪಿ; ಬಣ್ಣ ತೆಗೆಯುವಾಗಲೇ ಹೃದಯಾಘಾತವಾಗಿ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

spot_img
- Advertisement -
- Advertisement -

ಉಡುಪಿ; ಬಣ್ಣ ತೆಗೆಯುವಾಗಲೇ ಹೃದಯಾಘಾತವಾಗಿ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59) ನಿಧನವಾಗಿರುವ ಘಟನೆ  ಉಡುಪಿಯ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ಗಂಗಾಧರ ಪುತ್ತೂರು ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ, ರಾತ್ರಿ ಸುಮಾರು 12.25ಕ್ಕೆ ಚೌಕಿಯಲ್ಲಿ ಮಂಗಳ ಆಗುವ ವೇಳೆಗೇ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ 42 ವರ್ಷಕ್ಕೂ ಅಧಿಕ ಕಾಲ ನಿರಂತರ ಕಲಾವಿದನಾಗಿ ಸೇವೆ ಸಲ್ಲಿಸಿದ್ದರು.

ಪುತ್ತೂರು ತಾಲೂಕು ಕೋಡಿಂಬಾಡಿ ಸಮೀಪ ಸೇಡಿಯಾಪು ಎಂಬಲ್ಲಿ ಜನಿಸಿದ ಅವರು, ಏಳನೇ ತರಗತಿವರೆಗೆ ಓದಿ ಬಳಿಕ ಕುಂಬಳೆ ಶ್ರೀಧರ ರಾಯರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಯಕ್ಷಗಾನ ಕಲಿಕಾ ಕೇಂದ್ರಕ್ಕೆ ಸೇರಿದರು. ಅಲ್ಲಿ ಹಿರಿಯರಾದ ಗೋವಿಂದ ಭಟ್ ಮತ್ತು ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ಹೆಜ್ಜೆಗಾರಿಕೆಯನ್ನು ಕಲಿತು, ಶ್ರೀ ಧರ್ಮಸ್ಥಳ ಮೇಳಕ್ಕೆ ಬಾಲಕಲಾವಿದನಾಗಿ ಸೇರ್ಪಡೆಯಾದರು. ಹಂತ ಹಂತವಾಗಿ ಬೆಳೆದು ಬಂದ ಅವರು, ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ್ಯೆಯ ಮಾಲತಿ ಪಾತ್ರ ಸಹಿತ, ಕಸೆ ಸ್ತ್ರೀವೇಷ, ಗರತಿ ವೇಷಗಳು ಅಲ್ಲದೆ ಶೃಂಗಾರ ವೇಷಗಳಲ್ಲಿ ಮಿಂಚಿ ಪ್ರಮುಖ ಕಲಾವಿದರೊಂದಿಗೆ ಕೆಲಸ ಮಾಡಿದರು. ಕರ್ಗಲ್ಲು ಯಕ್ಷರೂಪಕ ತಂಡದಲ್ಲಿ ಒಂದು ವರ್ಷ, ಮುಳಿಯಾಲ ಭೀಮ ಭಟ್ಟರ ತಂಡದಲ್ಲಿ 10 ವರ್ಷ, 26 ವರ್ಷ ನಿಡ್ಲೆ ಮಹಾಗಣಪತಿ ಯಕ್ಷಗಾನ ಮಂಡಳಿಯ ಮಳೆಗಾಲದ ಕಾರ್ಯಕ್ರಮಗಳಲ್ಲಿ ಗಂಗಾಧರ ಭಾಗವಹಿಸಿದ್ದರು.

.

- Advertisement -
spot_img

Latest News

error: Content is protected !!