Friday, July 12, 2024
Homeಕರಾವಳಿಉಡುಪಿಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ಪ್ರಕರಣ;  ಮತ್ತೋರ್ವ ಆರೋಪಿಯನ್ನು ಬಂಧಿಸಿದ...

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ಪ್ರಕರಣ;  ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟಿನಲ್ಲಿ ಮೊನ್ನೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅದರಂತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಸಕ್ಲೈನ್ ಬಂಧಿತ ಆರೋಪಿ. ಈ ಹಿಂದೆ ಈ ಪ್ರಕರಣದಲ್ಲಿ ಕಾಪುವಿನ ಆಶಿಕ್ ಮತ್ತು ಗುಜ್ಜರಬೆಟ್ಟುವಿನ ರಾಕೀಬ್ ಬಂಧಿಸಲಾಗಿತ್ತು. ಈ ಎರಡು ತಂಡಗಳಲ್ಲಿ ಒಟ್ಟು 7-8 ಮಂದಿ ಇದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದು ವರೆಸಿದ್ದಾರೆ. ಇವರೆಲ್ಲ ಗರುಡ ಗ್ಯಾಂಗಿನವರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಗ್ಯಾಂಗ್ ಹೆಚ್ಚು ಸಕ್ರಿಯವಾಗಿಲ್ಲ. ಗ್ಯಾಂಗ್ ಒಳಗಿನ ದ್ವೇಷ ಹಾಗೂ ಒಳಜಗಳವೇ ಈ ದಾಳಿಗೆ ಕಾರಣ ಎನ್ನಲಾಗಿದೆ. ಈವರೆಗೆ ಒಟ್ಟು ಮೂವರನ್ನು ಬಂಧಿಸ ಲಾಗಿದ್ದು, ಉಳಿದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!