Wednesday, June 3, 2026
Homeಕರಾವಳಿಉಡುಪಿನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಕುಂದಾಪುರ: ನಿಷೇಧಿತ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಂದಾಪುರದ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಾದ ಕುಂದಾಪುರದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಎಂದು ತಿಳಿದು ಬಂದಿದೆ. ಒಂದು ಕೆಜಿ ಐವತ್ತು ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ಆರೋಪಿಗಳ ಬಳಿ ವಶಪಡಿಸಿಕೊಂಡಿದ್ದಾರೆ.

ಉಡಪಿ ಜಿಲ್ಲಾ ಪೊಲೀಸ್ ಅಧೀಕ್ಷರಾದ ವಿಷ್ಣುವರ್ಧನ್, ಕುಮಾರ್ ಚಂದ್ರ, ಟಿ.ಆರ್ ಜಯಶಂಕರ್‌ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ‌ ಇನ್ಸ್ಪೆಕ್ಟರ್ ಮಂಜಪ್ಪ ಹಾಗೂ ಎಎಸ್ಐ ರವಿಚಂದ್ರ ಮತ್ತು ಅವರ ಸಿಬ್ಬಂದಿಗಳಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ್,ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಕಾರ್ಯಚರಣೆಯಲ್ಲಿ‌ ಭಾಗವಹಿಸಿದ್ದರು. 

- Advertisement -

Latest News

error: Content is protected !!