- Advertisement -
- Advertisement -
ಬೆಳ್ತಂಗಡಿ: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದಾತನನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಕುಂಭ್ರಶೀ ಬಸ್ ನಿಲ್ದಾಣದ ಬಳಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಸಂತೋಷ್ (23) ಬಂಧಿತ ಆರೋಪಿ.
ಸಂತೋಷ್ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡ ಕಾರು ಚಲಾಯಿಸುತ್ತಿದ್ದ.ವೇಣೂರು ಪೊಲೀಸ್ ಠಾಣಾ ಪೊಲೀಸರು ತಡೆದು ನಿಲ್ಲಿಸಿದಾಗ ಆತನು ಅಮಲಿನ ನಶೆಯಲ್ಲಿದ್ದಂತೆ ಕಂಡು ಬಂದಿದೆ.ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನನ್ನು ವಶಕ್ಕೆ ಪಡೆದು ವೈದ್ಯಾಧಿಕಾರಿಗಳಿಂದ ತಪಾಸಣೆಗೆ ಒಳಪಡಿಸಿದಾಗ ನಿಷೇದಿತ ವಸ್ತು ಗಾಂಜಾವನ್ನು ಸೇವನೆ ಸೇವಿಸಿರುವುದು ದೃಢಪಟ್ಟಿರುತ್ತದೆ. ಸದ್ಯ ಆರೋಪಿ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 54/2023 ಕಲಂ: 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
- Advertisement -