Saturday, May 11, 2024
Homeಕರಾವಳಿಪುತ್ತೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

spot_img
- Advertisement -
- Advertisement -

ಪುತ್ತೂರು: ನಗರ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಹಾಗೂ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಇಲ್ಲಿನ ರೈಲ್ವೇ ಹಳಿಯ ಬಳಿಯಲ್ಲಿ ಗಾಂಜಾ ಇರಿಸಿಕೊಂಡಿದ್ದ ಇಬ್ಬರು ಆರೋಪಿಗಳು ಪತ್ತೆಯಾಗಿದ್ದಾರೆ. ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಕೋಚಟ್ಟೆ ನಿವಾಸಿ ಶಫೀಕ್ ಕೆ.ವಿ(24) ಮತ್ತು ಕುಂತೂರು ಎರ್ಮಲ ನಿವಾಸಿ ರಾಝಿಕ್(25) ಬಂಧಿತ ಆರೋಪಿಗಳು. ಇವರಿಂದ 21,500 ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಗಾಂಜಾ ಸಾಗಾಟದಾರರ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರ ತನಿಖೆ ನಡೆಸುತ್ತಿದ್ದ ವೇಳೆಯಲ್ಲಿ ಬಂಧಿತ ಆರೋಪಿಗಳು ನೀಡಿದ ಮಾಹಿತಿಯಂತೆ ಗಾಂಜಾ ಸರಬರಾಜುದಾರನೊಬ್ಬನನ್ನು ಬಳಿಕ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಝ್(30) ಬಂಧಿತ ಆರೋಪಿ.

ಬಂಧಿತ ಆರೋಪಿಯಿಂದ 2 ಕೆಜಿ ಗಾಂಜಾ, ಪರವಾನಿಗೆ ರಹಿತ ಪಿಸ್ತೂಲ್, ಸಜೀವ ಗುಂಡುಗಳು, ಕಾರು, ನಗದು, ಪಾನ್‌ಕಾರ್ಡ್, ಎಟಿಎಂ ಕಾರ್ಡ್, ಮೊಬೈಲ್ ಸೇರಿದಂತೆ ಒಟ್ಟು 5,86,530 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನೀಲ್ ಮಾರ್ಗದರ್ಶನದಂತೆ ಎಸ್ಸೈ ನಸ್ರೀನ್ ತಾಜ್ ಚಟ್ಟರಕಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!