Tuesday, June 23, 2026
Homeಕರಾವಳಿಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಮೂವರನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಮೂವರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಮೂವರನ್ನು ಬಂಧಿಸಿ ಅವರಿಂದ ಮೊಬೈಲ್ ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಸಿನಾನ್ ಯು. ಮತ್ತು ಮಹಮ್ಮದ್ ಅಫೀಲ್ ಎಂಬಿಬ್ಬರು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದನ್ನು ಕಂಡು ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಆರೋಪಿಗಳಲ್ಲಿದ್ದ ಮೂರು ಮೊಬೈಲ್‌ಗಳನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ 34 ನೇ ನೆಕ್ಕಿಲಾಡಿ ಗ್ರಾಮದ ಹಳೇ ಸೇತುವೆಯಲ್ಲಿ ಅಬ್ದುಲ್ ಅಜೀಜ್ ಎಂಬಾತ ಮಾರುತಿ ಸುಜುಕಿ ಅಲ್ಟೋ ಕಾರನ್ನು ಇರಿಸಿಕೊಂಡು ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರೊಡನೆ ಅನುಚಿತವಾಗಿ ವರ್ತಿಸುತ್ತಿದ್ದ. ಈತನನ್ನು ಕಾರು ಸಮೇತ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!