- Advertisement -
![]()
- Advertisement -
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇದುತ್ತಿದ್ದಾತನ ಬಂಧಿಸಿರುವ ಘಟನೆ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ನಡೆದಿದೆ.
ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಆ ವೈದ್ಯಕೀಯ ವರದಿಯಲ್ಲಿ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


