Thursday, June 4, 2026
Homeತಾಜಾ ಸುದ್ದಿಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವು

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವು

- Advertisement -
- Advertisement -

ಆಂಧ್ರಪ್ರದೇಶ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.


ಜೈನುಬಿ (60), ದಾದು (35), ಶರ್ಫುನಾ (30) ಮತ್ತು ಫಿರ್ದೋಜ್ (6) ಮೃತಪಟ್ಟಿದ್ದಾರೆ


ಗ್ಯಾಸ್ ಸ್ಫೋಟದ ರಭಸಕ್ಕೆ ಮನೆಯ ಮೇಲ್ಬಾವಣಿ ಕುಸಿದು ಬಿದ್ದು ಆರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ಪೈಕಿ ನಾಲ್ವರು ಅವಶೇಷಗಳಡಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮಸ್ಥರು ಕೂಡಲೇ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದವರನನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Latest News

error: Content is protected !!