Friday, June 26, 2026
Homeಕರಾವಳಿಉಡುಪಿಉಡುಪಿ: ಕಾರ್ಕಳದಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಉಡುಪಿ: ಕಾರ್ಕಳದಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

- Advertisement -
- Advertisement -

ಉಡುಪಿ: ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.ಕಾರ್ಕಳ ತಾಲೂಕಿನ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಅಪಾರ್ಟ್ ಮೆಂಟ್ ನಲ್ಲಿರುವ ನಾಲ್ಕು ಮನೆಗಳಿಗೆ ಹಾನಿ ಉಂಟಾಗಿದೆ.ಸ್ಫೋಟದಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ.

ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!