Sunday, June 7, 2026
Homeಅಪರಾಧಉಳ್ಳಾಲದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಉಳ್ಳಾಲದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

- Advertisement -
- Advertisement -

ಉಳ್ಳಾಲ: ಮಂಜನಾಡಿ ಗ್ರಾಮದ ಖಂಡಿಕೆ ಎಂಬಲ್ಲಿ ಡಿ.8ರಂದು ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಬಾಲಕಿಯೊಬ್ಬಳು ಇಂದು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೇರಿದೆ.

ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝ ಎಂಬವರು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಗ್ಯಾಸ್‌ ಸ್ಫೋಟಗೊಂಡು ಇಡೀ ಮನೆ ಹೊತ್ತಿಯುರಿದು, ಮನೆಯೊಳಗಿದ್ದವರು ಗಂಭೀರ ಗಾಯಗಳೊಂದಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು.

ಖುಬ್ರಾ ಅವರು ಡಿ.13ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದೀಗ ಬಾಲಕಿ ಮೆಹದಿಯಾ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಮಕ್ಕಳಾದ ಮಝಿಯಾ ಮತ್ತು ಮಾಯಿಝ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

- Advertisement -

Latest News

error: Content is protected !!