- Advertisement -
![]()
- Advertisement -
ಕಾರ್ಕಳ: ಇಲ್ಲಿನ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಈ ಅವಘಡವು ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ನಡೆದಿದೆ.
ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಪೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.
ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.
- Advertisement -


