Sunday, June 7, 2026
Homeಅಪರಾಧಗ್ಯಾಸ್‌ ಸಿಲಿಂಡರ್ ಕಳವು ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಗ್ಯಾಸ್‌ ಸಿಲಿಂಡರ್ ಕಳವು ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಗ್ಯಾಸ್‌ ಸಿಲಿಂಡರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಕೋಟೆರ್ಕಾ ನಿವಾಸಿ ಶರೀಫ್ ಸಿ.ಅಬ್ಟಾಸ್‌ ಎಂದು ತಿಳಿದು ಬಂದಿದೆ. ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಸುಮಾರು 22 ವರ್ಷಗಳ ಹಿಂದೆ ಆರೋಪಿಯು ಬಿ.ಸಿ.ರೋಡಿನ ಗ್ಯಾಸ್‌ ಏಜನ್ಸಿಯೊಂದರಿಂದ ಗ್ಯಾಸ್‌ ಸಿಲಿಂಡರ್ ಗಳನ್ನು ಕಳವು ಗೈದಿದ್ದ. ಈ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯನ್ನು ವಿಧಿಸಲಾಗಿತ್ತು. ಆದರೆ ಆರೋಪಿಯು ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಇನ್ನು ಆತನ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಮಂಗಳೂರಿನ ಬೈಕಂಪಾಡಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ನಗರ ಠಾಣಾ ಪೊಲೀಸ್‌ ಇನ್ಸ್ಪೆಕ್ಟರ್ ತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಸಿಬಂದಿ ಗಣೇಶ, ರಾಜೇಶ್‌ ಹಾಗೂ ಇರ್ಷಾದ್‌ ಅವರು ಬಂಧಿಸಿದ್ದಾರೆ.

ಇನ್ನು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. 

- Advertisement -

Latest News

error: Content is protected !!