Saturday, April 27, 2024
Homeಕರಾವಳಿಉಪ್ಪಿನಂಗಡಿ: ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ

ಉಪ್ಪಿನಂಗಡಿ: ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ

spot_img
- Advertisement -
- Advertisement -

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಸಮೀಪದ ಮುಗೇರಡ್ಕ ತಿರುವಿನಲ್ಲಿ ಅನಿಲ ಸಾಗಾಟದ ಬುಲೆಟ್ ಟ್ಯಾಂಕರೊಂದು ಇಂದು ಮುಂಜಾನೆ ಮಗುಚಿ ಬಿದ್ದಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ ಎಂದು ತಿಳಿದುಬಂದಿದೆ. ಇಂದು ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ಅನಿಲ ಸೋರಿಕೆ ಉಂಟಾಗಿದ್ದು, ಸ್ಥಳದಲ್ಲಿ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.

- Advertisement -
spot_img

Latest News

error: Content is protected !!