Saturday, May 4, 2024
Homeತಾಜಾ ಸುದ್ದಿಗುಂಡ್ಯ: ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಗ್ಯಾಸ್ ಸೋರಿಕೆಯಿಂದಾಗಿ ವಾಹನ ಸಂಚಾರ ಸ್ಥಗಿತ

ಗುಂಡ್ಯ: ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಗ್ಯಾಸ್ ಸೋರಿಕೆಯಿಂದಾಗಿ ವಾಹನ ಸಂಚಾರ ಸ್ಥಗಿತ

spot_img
- Advertisement -
- Advertisement -

ಗುಂಡ್ಯ: ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಿಂದಾಗಿ ವಾಹನ ಸಂಚಾರ ಸ್ಥಗಿತವಾಗಿದೆ.

ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.ಮಾರ್ಗ ಮಧ್ಯೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಲ್ಲೆ ನಿಂತಿವೆ.

ಬದಲಿ ಮಾರ್ಗ ವ್ಯವಸ್ಥೆ;
ಇನ್ನು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಹೋಗಿದ್ದು ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಬೇಕಾಗಿದೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ.ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

- Advertisement -
spot_img

Latest News

error: Content is protected !!