Thursday, July 16, 2026
Homeಕರಾವಳಿಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

- Advertisement -
- Advertisement -

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಂಗಳೂರು – ಬೆಂಗಳೂರು ರಾಷ್ಟ್ರೀಯ 75 ರ ಗುಂಡ್ಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಾಗಾಟದ ಟ್ಯಾಂಕರೊಂದು ರಸ್ತೆಗೆ ಮಗುಚಿ ಬಿದ್ದ ಘಟನೆ ಇಂದು ರಾತ್ರಿ ನಡೆದಿದೆ.

ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಇದಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ, ಆದರೆ ಯಾವುದೇ ಲೀಕೇಜ್ ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

- Advertisement -

Latest News

error: Content is protected !!